ಕಾರುಗಳ ಸರಣಿ ಅಪಘಾತ- ಮೂವರು ಸ್ಥಳದಲ್ಲೇ ಸಾವು…

58
firstsuddi

ಮುಂಬೈ: ನಗರದ ಬಾಂದ್ರಾ ವರ್ಲಿ ಸೀ ಲಿಂಕ್‍ನಲ್ಲಿರುವ ಟೋಲ್ ಪ್ಲಾಜಾದಲ್ಲಿ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಾಂದ್ರಾ ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ನಿನ್ನೆ ರಾತ್ರಿ 10.15ರ ಸುಮಾರಿಗೆ ಟೋಲ್ ಬಳಿ ಕಾರೊಂದಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರು ಚಾಲಕ ತಪ್ಪಿಸಿಕೊಳ್ಳಲು ಯತ್ನಿಸಿ ವೇಗವಾಗಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಟೋಲ್ ಸರದಿಯಲ್ಲಿದ್ದ ಹಲವಾರು ಕಾರುಗಳಿಗೆ ಇನ್ನೋವಾ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಮಹಿಳೆಯರು ಮತ್ತು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ 7ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ 2 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಇನ್ನೋವಾ ಕಾರಿನ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗಿದೆ. ಡಿಸ್ಚಾರ್ಜ್ ಆದ ನಂತರ ಚಾಲಕನನ್ನು ಬಂಧಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.