ಹಳೇ ವೈಷಮ್ಯ: ಗೋಕಾಕ್‍ನಲ್ಲಿ ಯುವಕನ ಬರ್ಬರ ಹತ್ಯೆ…

53
firstsuddi

ಬೆಳಗಾವಿ: ಹಳೇ ವೈಷಮ್ಯ ಹಿನ್ನಲೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಗೋಕಾಕ್‍ನಲ್ಲಿ ನಡೆದಿದೆ.

ಹತ್ಯೆಗೀಡಾದ ಯುವಕನನ್ನು ಶಾನೂರು ಪೂಜಾರಿ (27) ಎಂದು ಗುರುತಿಸಲಾಗಿದೆ. ಹತ್ಯೆಗೀಡಾದ ಯುವಕ ನಗರದ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಘಟನೆಯಿಂದ ಕೆರಳಿದ ಮೃತ ಯುವಕನ ಕುಟುಂಬಸ್ಥರು ಅದೇ ಕಾಲೋನಿಯ ಯುವಕರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ, ಆದಿಜಾಂಬವ ನಗರದಲ್ಲಿರುವ ಆರೋಪಿಯ ಮನೆ ಮುಂದೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಉದ್ವಿಘ್ನ ಯುವಕರ ಗುಂಪು ಆರೋಪಿಯ ಮನೆ ಮೇಲೆ ಕ್ಲಲು ತೂರಾಟ ನಡೆಸಿದೆ. ಅಲ್ಲದೇ ಯುವಕರು ಬೈಕ್ ಹಾಗೂ ಕಾರುಗಳನ್ನು ಜಖಂಗೊಳಿಸಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗೋಕಾಕ್ ಶಹರ್ ಠಾಣಾ ಪೊಲೀಸರು ಉದ್ರಿಕ್ತರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಈ ವೇಳೆ ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಮೃತನ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಈ ಕುರಿತು ಗೋಕಾಕ್ ಶಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.