ಉತ್ತರ ಪ್ರದೇಶ: ಆಗ್ರಾದ ಹೋಟೆಲ್ವೊಂದರಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಐವರನ್ನು ಪೊಲೀಸರು ಬಂಧಿಸಿದ್ದಾರೆ.
25 ವರ್ಷ ವಯಸ್ಸಿನ ಸಂತ್ರಸ್ತೆಯ ಆಕ್ಷೇಪಾರ್ಹ ವೀಡಿಯೋವನ್ನು ಈ ಹಿಂದೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕ್ಷೇಪಾರ್ಹ ವೀಡಿಯೋವನ್ನು ಇಟ್ಟುಕೊಂಡು ಮಹಿಳೆಯನ್ನು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿತ್ತು. ಬಲವಂತವಾಗಿ ಮದ್ಯ ಸೇವಿಸಿ ಆಕೆಯ ತಲೆಗೆ ಬಾಟಲಿಯಿಂದ ಹೊಡೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಅತ್ಯಾಚಾರ, ಹಲ್ಲೆ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಅತ್ಯಾಚಾರದ ಆರೋಪಗಳಲ್ಲದೆ, ಕೊಲೆ ಯತ್ನದ ಆರೋಪಗಳನ್ನು ಸಹ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪುರುಷರು ಹಾಗೂ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ. ಸಂತ್ರಸ್ತೆ ಹೋಟೆಲಿನ ಉದ್ಯೋಗಿಯಾಗಿದ್ದು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.










