ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್- ಮುಂದಿನ ವರ್ಷದ ದರ್ಶನಕ್ಕೆ ದಿನಾಂಕ ಫಿಕ್ಸ್…

58
firstsuddi

ಹಾಸನ: ಪ್ರಸಕ್ತ ವರ್ಷ ಶಕ್ತಿದೇವತೆ ಹಾಸನಾಂಬೆ ಉತ್ಸವ ಸಂಪನ್ನಗೊಂಡಿದೆ. ನವೆಂಬರ್ 2ರಿಂದ 14 ದಿನಗಳ ಕಾಲ ನಡೆದ ಹಾಸನಾಂಬೆ ಉತ್ಸವಕ್ಕೆ ಇಂದು ವಿದ್ಯುಕ್ತವಾಗಿ ತೆರೆ ಕಂಡಿದೆ.

ಇಂದು ಮಧ್ಯಾಹ್ನ 12.23ಕ್ಕೆ ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್‌ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಜಿಲ್ಲಾಧಿಕಾರಿ ಸೇರಿದಂತೆ ಹಲವರ ಸಮ್ಮುಖದಲ್ಲಿ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್ ಮಾಡಲಾಯಿತು. ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವುಗೊಳಿಸಿ ಬಳಿಕ ಅರ್ಚಕ ನಾಗರಾಜ್ ಪೂಜೆ ಮಾಡಿ ಗರ್ಭಗುಡಿ ಬಾಗಿಲಿಗೆ ಬೀಗ ಹಾಕಿದರು.

ಪ್ರಸಕ್ತ ವರ್ಷ ನವೆಂಬರ್ 2ರಂದು ಹಾಸನಬಾಂಬೆ ದೇವಸ್ಥಾನ ತೆರೆಯಲಾಗಿತ್ತು. ಆದರೆ, ನವೆಂಬರ್ 3ರಿಂದ ನ.15ರ ಬೆಳಗ್ಗೆ 7 ಗಂಟೆ ವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಸಮಯದಲ್ಲಿ ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ. ಇದೀಗ ಮುಂದಿನ ವರ್ಷ ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕವನ್ನು ನಿಗದಿ ಮಾಡಲಾಗಿದ್ದು, 2024ರ ಅಕ್ಟೋಬರ್ 24ರಿಂದ ನವೆಂಬರ್ 3ರ ವರೆಗೆ ಹಾಸನಾಂಬೆ ದರ್ಶನ ಇರಲಿದೆ. ಇದರೊಂದಿಗೆ ಒಟ್ಟು 9 ದಿನಗಳ ಕಾಲ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುತ್ತದೆ.