ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ…

70
firstsuddi

ಶಿವಮೊಗ್ಗ: ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ.

ಹತ್ಯೆಯಾದ ವ್ಯಕ್ತಿಯನ್ನು 35 ವರ್ಷದ ಮಲ್ಲೇಶ್ ಎಂದು ಗುರುತಿಸಲಾಗಿದೆ. ಹತ್ಯೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಶಿವಮೊಗ್ಗ ಎಸ್​​ಪಿ ಮಿಥುನ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಲ್ಲೇಶ್ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.