ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನಿಂದ ಪ್ರೀತಿ ಹೆಸರಲ್ಲಿ ವಂಚನೆ- ಯುವತಿಯಿಂದ ಗಂಭೀರ ಆರೋಪ…

74
firstsuddi

ಬೆಂಗಳೂರು: ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನಿಂದ ಪ್ರೀತಿ ಹೆಸರಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಎಂಪಿ ದೇವೆಂದ್ರಪ್ಪ ಅವರ ಮಗನ ವಿರುದ್ಧ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ.

ಮೈಸೂರಿನಲ್ಲಿ ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಬೆಂಗಳೂರು ಮೂಲದ ಯುವತಿಗೆ ವಂಚಿಸಿರುವುದಾಗಿ ಆರೋಪಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ಪಾರ್ಟಿವೊಂದರಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿರುವ ರಂಗನಾಥ್, ಬಳಿಕ ಮೈಸೂರಿನ ಹೋಟೆಲ್​ನಲ್ಲಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈಗ ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತೆ ಬಸವನಗುಡಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ಎಂಪಿ ದೇವೇಂದ್ರಪ್ಪ ಅವರ ಮಗ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.