ಕಂಟೈನರ್ ಲಾರಿಗೆ ಆಟೋ ಡಿಕ್ಕಿ- 11 ವಿದ್ಯಾರ್ಥಿಗಳಿಗೆ ಗಾಯ…

54
firstsuddi

ಚಿಕ್ಕಬಳ್ಳಾಪುರ: ಆಟೋ ರಿಕ್ಷಾ ಹಾಗೂ ಕಂಟೈನರ್ ಸಾಗಿಸುವ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 11 ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು ನಗರದ ನಾಗಪ್ಪ ಸರ್ಕಲ್‌ನಲ್ಲಿ ನಡೆದಿದೆ.

ಘಟನೆಯಲ್ಲಿ 11 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. 11 ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳು ವಿದ್ಯಾರ್ಥಿಗಳೆಲ್ಲರೂ ಗೌರಿಬಿದನೂರು ನಗರದ ಮುನ್ಸಿಪಲ್ ಕಾಲೇಜಿನವರು ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.