ತುಮಕೂರು: ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
11 ತಿಂಗಳ ಮಗು, 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದರು. ಈ ನೋವಿನಲ್ಲೇ ವಿಜಯಲಕ್ಷ್ಮೀ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಈ ಕುರಿತು ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










