ಚಿಕ್ಕಬಳ್ಳಾಪುರ: ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಬಳಿಯ ನಗರ್ಲು ಕ್ರಾಸ್ ಬಳಿ ನಡೆದಿದೆ.
ಬಸ್ ಚೇಳೂರು ಚಾಕವೇಲು ಪಾತಪಾಳ್ಯ ಮೂಲಕ ಬಾಗೇಪಲ್ಲಿಗೆ ಬರುತ್ತಿತ್ತು. ಈ ವೇಳೆ ಓವರ್‌ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಹಲವು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಚಿಂತಾಮಣಿ ಹಾಗೂ ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಈ ಘಟನೆ ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.










