ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಮಹಿಳೆ ಸಾವು…

49
firstsuddi

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಮಹಿಳೆ ಸಾವಿಗೀಡಾಗಿರುವ ಘಟನೆ ಇಂದು ಬೆಳಗ್ಗೆ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಬೆಂಗಳೂರು ಮೂಲದ ಪೂಜಾ ಎಂದು ಗುರುತಿಸಲಾಗಿದೆ. ಬಸ್ ನಿಲ್ದಾಣದ ಒಳಗಡೆ ಮಹಿಳೆ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಏಕಾಏಕಿ ಮಹಿಳೆಗೆ ಬಸ್ ಗುದ್ದಿದ ಪರಿಣಾಮ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ಈ ಕುರಿತು ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.