ಮಂಡ್ಯ: ಮಗಳ ಎದುರೇ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಎಲೆಕೆರೆ ಗ್ರಾಮದಲ್ಲಿ ನಡೆದಿದೆ.
ಪಾರ್ವತಮ್ಮ(50) ಕೊಲೆಯಾದ ದುರ್ದೈವಿ. ಪಾರ್ವತಮ್ಮ ಅವರು ಮಗಳು ಅರ್ಪಿತಾ ಜೊತೆ ಮನೆದೇವರ ಪೂಜೆ ಮುಗಿಸಿಕೊಂಡು ಮನೆಗೆ ವಾಪಾಸ್ ಬರುವಾಗ ವ್ಯಕ್ತಿಯೊಬ್ಬ ಅವರನ್ನು ಅರ್ಧ ಕಿಲೋಮೀಟರ್ ದೂರದಿಂದಲೇ ಹಿಂಬಾಲಿಸಿಕೊಂಡು ಬಂದಿದ್ದಾನೆ. ನಿರ್ಜನ ಪ್ರದೇಶ ನೋಡಿ ಆರೋಪಿಯು ಪಾರ್ವತಮ್ಮನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.










