ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು…

53
firstsuddi

ಕಾರವಾರ: ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಶಾಲ್ಮಲಾ ನದಿಯ ಭೂತದಗುಂಡಿಯಲ್ಲಿ ನಡೆದಿದೆ.

ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (44), ನಾದಿಯಾ ನೂರ್ (20), ನಬಿಲ್ ನೂರ್ ಅಹ್ಮದ್(22), ವಿದ್ಯಾರ್ಥಿಗಳಾದ ಉಮರ್ ಸಿದ್ದಿಕ್(14), ಮಿಸ್ಬಾ ತಬಸುಮ್(21) ಮೃತರು. ನಿನ್ನೆ ರಜೆ ಹಿನ್ನೆಲೆಯಲ್ಲಿ ಈಜಲು ತೆರಳಿದ್ದಾಗ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಶಿರಸಿ ಪೊಲೀಸರು ಹಾಗೂ ಅಗ್ನಿಶಾಮಕದಳ ಭೇಟಿ ನೀಡಿ ಶೋಧಕಾರ್ಯ ನಡೆಸಿದ್ದು, ರಾತ್ರಿವರೆಗೆ ನಡೆದ ಕಾರ್ಯಾಚರಣೆಯಲ್ಲಿ ಐವರ ಮೃತದೇಹ ಪತ್ತೆಯಾಗಿವೆ.