ಪತ್ನಿ ಮೇಲೆ ಅತ್ಯಾಚಾರಕ್ಕೆ ಯತ್ನ- ತಡೆಯಲು ಹೋದ ಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಆರೋಪಿ ಪರಾರಿ…

50

ಮೈಸೂರು: ವ್ಯಕ್ತಿಯೋರ್ವ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸ ಕಡಜಟ್ಟಿ ಗ್ರಾಮದಲ್ಲಿ ನಡೆದಿದೆ.

ನವೀನ್ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆ ಮೇಲೆ ಎರಗಿ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆಯ ಚೀರಾಟ ಕೇಳಿ ಸ್ಥಳಕ್ಕಾಗಮಿಸಿದ ಪತಿ ಮಹಾದೇವಪ್ಪ, ಪತ್ನಿಯನ್ನ ರಕ್ಷಿಸಲು ಮುಂದಾದಾಗ ಆರೋಪಿ ಆತನ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಹಲ್ಲೆಯಿಂದ ಗಾಯಗೊಂಡ ದಂಪತಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟಿ, ದಫೆದರ್ ದೊಡ್ಡಯ್ಯ ಸ್ಥಳ ಪರಿಶೀಲನೆ ನಡೆಸಿ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.