ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರ- ಐಸಿಯುನಲ್ಲಿ ಚಿಕಿತ್ಸೆ…

63
firstsuddi

ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್ ಆಗಿತ್ತು ಎಂದು ತಿಳಿದು ಬಂದಿದೆ. ಹೇಮಾ ಅವರ ಮಗ ಐರ್ಲೆಂಡ್​ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಹೇಮಾ ಕಾಯುತ್ತಿದ್ದು, ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಮೂರು ದಿನಗಳ ಹಿಂದೆಯಷ್ಟೇ ಅವರು ಲೀಲಾವತಿ ಅವರ 11ನೇ ದಿನದ ಕಾರ್ಯದಲ್ಲಿ ಭಾಗಿಯಾಗಿ ವಿನೋದ್ ರಾಜ್ ಅವರಿಗೆ ಸಾಂತ್ವನ ಕೂಡ ಹೇಳಿದ್ದರು. ಆಸಮಯದಲ್ಲಿ ಆರೋಗ್ಯವಾಗಿದ್ದ ಹೇಮಾ ಅವರು, ಅಲ್ಲಿಂದ ಬಂದ ನಂತರ ಏಕಾಏಕಿ ಮೆದುಳಿನಲ್ಲಿ ರಕ್ತಸ್ರಾವ ಆಗಿದೆ ಎಂದು ಹೇಳಲಾಗುತ್ತಿದೆ.

70ರ ದಶಕದಲ್ಲೇ ಹೇಮಾ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು. ಕನ್ನಡ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಈಗ ಅವರಿಗೆ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.