ಬೆಂಗಳೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ನಡೆದಿದೆ.
ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಸಂತೋಷ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಈ ಕುರಿತು ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










