ಚುನಾವಣೆಯಲ್ಲಿ ಸೋತಿದ್ದಕ್ಕೆ ಮನನೊಂದು ಕರ್ನಾಟಕ ವಿವಿ ನೌಕರ ಆತ್ಮಹತ್ಯೆ…

35
firstsuddi

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದಕ್ಕೆ ಮನನೊಂದು ಅಭ್ಯರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಮುರುಘಾ ಮಠದ ಬಳಿ ನಡೆದಿದೆ.

ವಿಶ್ವವಿದ್ಯಾಲಯದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಚಂದ್ರಕಾಂತ್ ಸಾವಳಗಿ (55) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಶನಿವಾರ ಚುನಾವಣೆ ಫಲಿತಾಂಶ ಬಂದ ಮೇಲೆ ಮನೆಗೆ ವಾಪಸ್ ಆಗಿದ್ದ ಅವರು ಅದೇ ದಿನ ರಾತ್ರಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೂರ್ನಾಲ್ಕು ದಿನಗಳಿಂದ ಮನೆಯ ಬಾಗಿಲು ತೆರೆಯದ ಕಾರಣ ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಪೊಲೀಸರು ಬಂದು ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಶಹರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.