ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನಗೆ ಇನ್ನೂ ಆಹ್ವಾನ ಬಂದಿಲ್ಲ: ಸಿಎಂ ಸಿದ್ದರಾಮಯ್ಯ.

34
firstsuddi

ಕೊಪ್ಪಳ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನಗೆ ಇನ್ನೂ ಆಹ್ವಾನ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಇಂದು ಜಿಲ್ಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಶದ ಹಲವಾರು ಪ್ರಮುಖ ವ್ಯಕ್ತಿಗಳು ಮತ್ತು ರಾಜಕೀಯ ನಾಯಕರನ್ನು ಈ ಮಹಾ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿದೆ. ಆದರೆ ಇಂದಿನವರೆಗೂ ನನಗೆ ಯಾವುದೇ ಆಹ್ವಾನ ಬಂದಿಲ್ಲ, ಆಹ್ವಾನ ಬಂದ ನಂತರ ಆ ಬಗ್ಗೆ ಯೋಚಿಸುತ್ತೇನೆ ಎಂದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.