ದೇಶದಲ್ಲಿ 602 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,15,083ಕ್ಕೆ ಏರಿಕೆ…

49
firstsuddi

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 602 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,15,083ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,371ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,50,15,083 ಮಂದಿ ಸೋಂಕಿತರ ಪೈಕಿ ಈವರೆಗೆ 4,44,77,272 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.