ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ…

48
firstsuddi

ಬೆಂಗಳೂರು: ಎದೆಯ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉತ್ತರ ತಾಲೂಕಿನ ಭವಾನಿನಗರದಲ್ಲಿ ನಡೆದಿದೆ.

ವಿಶು ಉತ್ತಪ್ಪ (19) ಆತ್ಮಹತ್ಯೆ ಮಾಡಿಕೊಂಡ ಬಿಇ ಪ್ರಥಮ ವರ್ಷದ ವಿದ್ಯಾರ್ಥಿ. ಈತ ಕೊಡಗು ಮೂಲದ ತಮ್ಮಯ್ಯ ಎಂಬುವವರ ಮಗನಾಗಿದ್ದಾನೆ. ತಂದೆಯ ಗನ್​ನಿಂದ ಫೈರ್ ಮಾಡಿಕೊಂಡು ವಿಶು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಡಗು ಮೂಲದ ತಮ್ಮಯ್ಯ ಎಂಬವರು ನೈಸ್ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿ ಆಗಿದ್ದು, ಕಳೆದ 15 ವರ್ಷದಿಂದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಭವಾನಿನಗರದಲ್ಲಿ ಕುಟುಂಬ ಸಹಿತ ವಾಸವಿದ್ದರು.

ತಂದೆ ರೇಷನ್ ತರಲು ಹೋದಾಗ ವಿಶು ಗನ್​ನಿಂದ ಫೈಯರ್ ಮಾಡಿಕೊಂಡು ತಂದೆಗೆ ಕರೆ ಮಾಡಿದ್ದಾನೆ. ನಾನು ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಎಂದು ಹೇಳಿದ್ದಾನೆ. ಇದನ್ನು ಕೇಳಿ ಗಾಬರಿಗೊಂಡ ತಂದೆ ಮನೆಗೆ ದೌಡಾಯಿಸಿ ಬಂದು ನೋಡಿದಾಗ ವಿಶು ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದನು. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.