ರಾಮನಗರ: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಲು ಹೋರಾಟ ಮಾಡಬೇಕೆಂಬ ಯತೀಂದ್ರ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರು ಯಾಕೆ ಚರ್ಚೆ ಮಾಡಿದರು ಅಂತ ಅವರನ್ನೇ ಕೇಳಿ. ಅವರು ಆ ರೀತಿ ಹೇಳುವ ಅವಶ್ಯಕತೆ ಇಲ್ಲ ಎಂದರು.
ಭಾರತ ಹಿಂದೂ ರಾಷ್ಟ್ರವಾದರೆ, ಪಾಕಿಸ್ತಾನದ ರೀತಿ ದಿವಾಳಿಯಾಗುತ್ತದೆಂಬ ಯತೀಂದ್ರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ನಮ್ಮ ದೇಶ ಬಲಿಷ್ಠವಾಗಿದೆ. ಈ ದೇಶಕ್ಕೆ ಭದ್ರ ಬುನಾದಿ ಹಾಕಿರುವುದು ಕಾಂಗ್ರೆಸ್. ನೆಹರು ನಮಗೆ ಗಟ್ಟಿ ತಳಪಾಯ ಕೊಟ್ಟಿದ್ದಾರೆ. ಅದಾದ ಬಳಿಕ ಬಂದ ಪ್ರಧಾನಿಗಳು ಅವರ ಶಕ್ತಿಅನುಸಾರ ಕೆಲಸ ಮಾಡಿದ್ದಾರೆ. ಅದನ್ನು ಹೊರತು ಪಡಿಸಿ ಬೇರೆ ವಿಚಾರಗಳಿಗೆ ಮಾತನಾಡಲ್ಲ. ಯತೀಂದ್ರ ಅವರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ ಎಂದು ತಿಳಿಸಿದರು.










