ಎರಡು ಕಾರು, ಲಾರಿ ನಡುವೆ ಸರಣಿ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು…

53
firstsuddi

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಹಾಸನ ಮೂಲದ ಮೂವರು ಹಾಗೂ ಬೆಂಗಳೂರಿನ ಒಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಹಾಸನ ಮೂಲದ ಮಣಿಕಂಠ (26), ಪವನ (23), ಚಂದನ (31) ಮತ್ತು ಬೆಂಗಳೂರಿನ ಪ್ರಭು (34) ಎಂದು ಗುರುತಿಸಲಾಗಿದೆ. ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕುಂದಗೋಳ ಪೊಲೀಸರು ಹಾಗೂ ಧಾರವಾಡ ಎಸ್‍ಪಿ ಡಾ.ಗೋಪಾಲ ಬ್ಯಾಕೋಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.