ಬೆಂಗಳೂರು ಗ್ರಾಮಾಂತರ: ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಯಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರದ ತ್ಯಾಗರಾಜನಗರದ ಮನೆಯೊಂದರಲ್ಲಿ ನಡೆದಿದೆ.
ಜಾನ್ಸಿ(17) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿನಿ. ನಿನ್ನೆ ಕಾಲೇಜಿನಿಂದ ಮನೆಗೆ ಬಂದವಳು, ಮನೆಯಲ್ಲಿ ಯಾರು ಇಲ್ಲದ ವೇಳೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್‍ನೋಟ್‍ನಲ್ಲಿ ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ಯೂ. ನಾನು ಲೋಕ ಬಿಟ್ಟು ತೆರಳುತ್ತಿದ್ದೇನೆ, ಎಲ್ಲರೂ ಖುಷಿ ಖುಷಿಯಾಗಿರಿ ಎಂದು ಬರೆದಿದ್ದಾಳೆ.
ಇನ್ನೂ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.










