ದೆಹಲಿಯಲ್ಲಿ ಪ್ರಬಲ ಭೂಕಂಪ- 6.1 ತೀವ್ರತೆ ದಾಖಲು…

51
firstsuddi

ನವದೆಹಲಿ: ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಭೂಕಂಪ ಸಂಭವಿಸಿದೆ. ಉತ್ತರ ಭಾರತದ ಪಂಜಾಬ್, ಚಂಡೀಗಢ, ಗಾಜಿಯಾಬಾದ್​ನಲ್ಲೂ ಕಂಪನದ ಅನುಭವವಾಗಿದೆ.

ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ ಎನ್ನಲಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1ರಷ್ಟು ದಾಖಲಾಗಿದೆ. ಭೂಕಂಪ ಸಂಭವಿಸಿದ ತಕ್ಷಣ ಮನೆ, ಕಚೇರಿಯಿಂದ ಜನರು ಹೊರಗಡೆ ಓಡಿ ಬಂದಿದ್ದಾರೆ.

ಭೂಕಂಪದಿಂದ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ. ಇತ್ತೀಚಿನ ದಿನಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪನಗಳು ನಿರಂತರವಾಗಿ ಸಂಭವಿಸುತ್ತಿವೆ ಎಂಬುದು ಗಮನಾರ್ಹ. ದೆಹಲಿ-ಎನ್‌ಸಿಆರ್‌ ಭೂಕಂಪನ ವಲಯ 4 ರಲ್ಲಿದೆ. ಭೂಕಂಪದ ದೃಷ್ಟಿಕೋನದಿಂದ ಇದನ್ನು ಅತ್ಯಂತ ಸೂಕ್ಷ್ಮವೆಂದು ಪರಿಗಣಿಸಲಾಗುತ್ತದೆ.