ಶಿವಮೊಗ್ಗದಲ್ಲಿಂದು ಯುವನಿಧಿ ಯೋಜನೆಗೆ ಅಧಿಕೃತ ಚಾಲನೆ…

40
firstsuddi

ಬೆಂಗಳೂರು: ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಯುವನಿಧಿ ಯೋಜನೆ’ಗೆ ಶಿವಮೊಗ್ಗ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಚಾಲನೆ ನೀಡುತ್ತಿದ್ದಾರೆ.

ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದೆ. ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಂದ ನೋಂದಣಿ ಮಾಡಿಕೊಂಡಿದ್ದಾರೆ.

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ 5 ನೇ ಗ್ಯಾರಂಟಿ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಜಾರಿಗೆ ತರುತ್ತಿದೆ. ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದೆ. ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಂದ ನೋಂದಣಿ ಮಾಡಿಕೊಂಡಿದ್ದಾರೆ.

ಯುವ ನಿಧಿ ಚಾಲನೆ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಚಿತ್ರದುರ್ಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ ಸೇರಿ ಬೇರೆ ಬೆರೆ ಜಿಲ್ಲೆಗಳಿಂದ ಜನ ಆಗಮಿಸುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆಯಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.