ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ…

60
firstsuddi

ಬೆಳಗಾವಿ: ಮಹಿಳೆಯೊಬ್ಬರು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸರಸ್ವತಿ ಕಿರವೆ(27), ಮಕ್ಕಳಾದ ದೀಪಿಕಾ(7), ರೀತಿಕಾ(4) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ನಿವಾಸಿ ಕಿರಣ ಎಂಬುವವರ ಜೊತೆ 2016ರಲ್ಲಿ ಸರಸ್ವತಿ ವಿವಾಹವಾಗಿದ್ದರು. ಕಿರಣ ಮದ್ಯವ್ಯಸನಿಯಾಗಿದ್ದು, ಈತನ ಕಿರುಕುಳ ತಾಳಲಾರದೆ ಸರಸ್ವತಿ ತವರು ಮನೆ ಸೇರಿದ್ದಳು. ಆದರೂ ಸಹ ಕೌಟುಂಬಿಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದ ಆಕೆ ಮನನೊಂದು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಸೂಚನೆ ಮೇರೆಗೆ ಸ್ಥಳೀಯರು ಮೂರು ಮೃತದೇಹಗಳನ್ನು ಬಾವಿಯಿಂದ ಹೊರ ತೆಗೆದಿದ್ದಾರೆ. ಈ ಕುರಿತು ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.