ಫೆಬ್ರವರಿ 16ರಂದು ರಾಜ್ಯ ಬಜೆಟ್ ಮಂಡನೆ…

43
firstsuddi

ಬೆಂಗಳೂರು: ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ.

ಈ ಸಂಬಂಧ ಇಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆದಿದ್ದು, ವಿಧಾನಮಂಡಲ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಮುಂದೆ ಲೋಕಸಭಾ ಚುನಾವಣೆ ಬರಲಿದೆ. ಹೀಗಾಗಿ ಚುನಾವಣೆ ನೀತಿ ಸಂಹಿತೆ ಇದೇ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್ ನ್ನು ಫೆಬ್ರವರಿಯಲ್ಲಿ ಮಂಡಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ.

ಒಟ್ಟಿನಲ್ಲಿ ಮುಂದೆ ಚುನಾವಣೆ ಇರುವುದರಿಂದ ಈ ಬಾರಿ ಸಿದ್ದರಾಮಯ್ಯನವರ ಬಜೆಟ್ ತೀವ್ರ ಕುತೂಹಲ ಮೂಡಿಸಿದೆ.