ಇಂದು ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಭಾರತೀಯ ಸಿನಿಮಾ ರಂಗದ ಅನೇಕ ತಾರೆಯರು ಭಾಗಿಯಾಗಿದ್ದಾರೆ.
ಈಗಾಗಲೇ ಕನ್ನಡದ ಹೆಸರಾಂತ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಅನಿಲ್ ಕುಮಾರ ಸ್ವಾಮಿ, ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್, ತೆಲುಗು ನಟರಾದ ಚಿರಂಜೀವಿ, ರಾಮ್ಚರಣ್, ಪವನ್ ಕಲ್ಯಾಣ್ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ತ್, ಕತ್ರಿನಾ ಕೈಫ್ ಸೇರಿದಂತೆ ಅನೇಕ ನಟ ನಟಿಯರು ಅಯೋಧ್ಯೆಗೆ ಆಗಮಿಸಿದ್ದಾರೆ.
ಕೇವಲ ಸಿನಿಮಾ ನಟರು ಮಾತ್ರವಲ್ಲ, ಕ್ರೀಡಾ ತಾರೆ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ವೆಂಕಟೇಶ್ ಪ್ರಸಾದ್, ಆರ್.ಅಶ್ವಿನ್, ಸೈನಾ ನೆಹ್ವಾಲ್ ಸೇರಿದಂತೆ ಅನೇಕರು ಅಯೋಧ್ಯೆಗೆ ಆಗಮಿಸಿದ್ದು, ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.










