ಶಿವಮೊಗ್ಗ: ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠೆ ಸಂಭ್ರಮದ ವೇಳೆ ಅಲ್ಲಾಹು ಅಕ್ಬರ್ ಎಂದು ಕೂಗಿದ ಮುಸ್ಲಿಂ ಮಹಿಳೆ…

45
firstsuddi

ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ವೇಳೆ ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಘಟನೆ ನಡೆಯಿತು.

ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ, ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಸಿಹಿ ವಿತರಿಸಿದರು. ಈ ವೇಳೆ ಹಿಂದೂ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದರು. ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಾರೆ. ನೀವು ಮೋದಿ ಪರ ಕೆಲಸ ಮಾಡ್ತಿದ್ದೀರಾ ಎಂದು ಪೊಲೀಸರಿಗೆ ಮುಸ್ಲಿಂ ಮಹಿಳೆ ಅವಾಜ್ ಹಾಕಿದ್ದಾರೆ. ಸ್ಥಳದಲ್ಲಿದ್ದ ಹಿಂದೂ ಕಾರ್ಯಕರ್ತರು ಮುಸ್ಲಿಂ ಮಹಿಳೆಯ ಹೇಳಿಕೆಗೆ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಘಟನೆ ಬಳಿಕ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಕೆಯ ಪೂರ್ವಾಪರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಬಗ್ಗೆ ಮಹಿಳೆ ತಂದೆ, ಪೊಲೀಸರಿಗೆ ದಾಖಲೆಗಳನ್ನು ನೀಡಿದ್ದಾರೆ. ಮಾನಸಿಕ ಕಾಯಿಲೆಗೆ ಮುಸ್ಲಿಂ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಎಸ್‌ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.