ಗದಗ: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ತಮಿಳುನಾಡು ಮೂಲದ ಲಾರಿ ಚಾಲಕ ವಿನೋದ್ ಕುಮಾರ್ (38) ಹಾಗೂ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೊಪ್ಪಳದ ಭಾಗ್ಯನಗರದ ನಿವಾಸಿ ಗೀತಾ ಕಲಾಲ್ (40) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.










