ಮಗನನ್ನೇ ಗುಂಡು ಹಾರಿಸಿ ಕೊಲೆಗೈದ ತಂದೆ.

40
firstsuddi

ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಮಗನನ್ನು ಗುಂಡು ಹಾರಿಸಿ ಕೊಲೆಗೈದ ದಾರುಣ ಘಟನೆ ನಗರದ ಕರೆಕಲ್‍ನಲ್ಲಿ ನಡೆದಿದೆ.

ನರ್ತನ್ ಬೋಪಣ್ಣ (32) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಅವರ ತಂದೆ ಸುರೇಶ್ ವಿನಾಕಾರಣ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ನಡೆದ ತಕ್ಷಣ ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಮನೆಗೆ ತೆರಳಿದ್ದರು. ಈ ವೇಳೆ ನರ್ತನ್ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ. ಕೂಡಲೇ ಪೊಲೀಸರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವಿಗೀಡಾಗಿದ್ದಾರೆ. ಸದ್ಯ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆಯ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.