ಎಂಜಿ ರೋಡ್- ಬೈಯಪ್ಪನಹಳ್ಳಿ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ…

39
firstsuddi

ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದಾಗಿ ಎಂ.ಜಿ. ರಸ್ತೆ- ಬೈಯಪ್ಪನಹಳ್ಳಿ ನಡುವೆ ಮೆಟ್ರೊ ರೈಲು ಸಂಚಾರ ಸ್ಥಗಿತಗೊಂಡಿದೆ.

ಮುಂದಿನ ಒಂದು ಗಂಟೆಯವರೆಗೆ ನೇರಳೆ ಮಾರ್ಗದ ಎರಡು ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸೇವೆ ಲಭ್ಯವಿಲ್ಲ. ಉಳಿದ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೊ ರೈಲು ಸಂಚಾರ ನಡೆಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ (ಬಿಎಂಆರ್​ಸಿಎಲ್) ಮಾಹಿತಿ ನೀಡಿದೆ.

ಮೆಟ್ರೊ ರೈಲು ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಾಗಿ ಬಿಎಂಆರ್​ಸಿಎಲ್ ವಿಷಾದ ವ್ಯಕ್ತಪಡಿಸಿದೆ.

ಹೋಯ್ಸಳ ಪೊಲೀಸರು ಪ್ರಯಾಣಿಕರಿಗೆ ಈ ಕುರಿತು ಅನೌನ್ಸ್ ಮೆಂಟ್ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಆಟೋ, ಕ್ಯಾಬ್ ಗಳ ಮೂಲಕ ಜನ ಹೋಗುತ್ತಿದ್ದಾರೆ.