ಬೆಂಗಳೂರು: ಬಿಬಿಎಂಪಿ ಕಸದ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಗರದ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಸೀದಿ ರಸ್ತೆ ಬಳಿ ನಡೆದಿದೆ.
ಈಕೆ ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದಳು. ಸಂಜೆ ಅಂತ್ಯಕ್ರಿಯೆ ನಡೆಯಿತು. ಪುಲಕೇಶಿನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.










