ಬೆಳಗಾವಿಯಲ್ಲಿ ಸಿಲಿಂಡರ್ ಸ್ಫೋಟ- ಇಬ್ಬರ ದಾರುಣ ಸಾವು…

48
firstsuddi

ಬೆಳಗಾವಿ: ಸಿಲಿಂಡರ್ ಸ್ಫೋಟಗೊಂಡು ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಬಸವನಗಲ್ಲಿಯ ಅಪಾರ್ಟ್‍ಮೆಂಟ್ ನಲ್ಲಿ ನಡೆದಿದೆ.

ಉಡುಪಿ ಮೂಲದ ಕಾಮಾಕ್ಷಿ ಭಟ್ (80), ಹೇಮಂತ್ ಭಟ್ (27) ಮೃತ ದುರ್ದೈವಿಗಳು. ಅಪಾರ್ಟ್‍ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭೀಕರ ಅಪಘಾತ ನಡೆದಿದ್ದು, ಮನೆಯಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿವೆ.

ಘಟನೆಯಲ್ಲಿ ಗಾಯಗೊಂಡಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಖಡೇಬಜಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.