ತರೀಕೆರೆ: ತಾಲೂಕಿನ ನೇರಲಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಗಣರಾಜ್ಯೋತ್ಸವದ ಅರಿವು ಕಾರ್ಯಕ್ರಮ ಹೀಗೆ ಹಲವಾರು ಕಾರ್ಯಕ್ರಮವನ್ನು ಶಾಲೆಯಲ್ಲಿ ಆಯೋಜನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕೃಷಿ ಕಾಲೇಜು, ಶಿವಮೊಗ್ಗದ ವಿದ್ಯಾರ್ಥಿನಿಯರು ಶಾಲಾ ಮಕ್ಕಳೊಡನೆ ಭಾಗಿಯಾದರು.
ಎಸ್ ಡಿಎಂಸಿ ಅಧ್ಯಕ್ಷರಾದ ಮಧು ಧ್ವಜಾರೋಹಣ ನೆರವೇರಿಸಿದರು. ನೌಕರ ಸಂಘದ ತಾಲೂಕು ಅಧ್ಯಕ್ಷ ನಾಗರಾಜಪ್ಪ, ಶಿಕ್ಷಕರಾದ ನವ್ಯ, ಬಸವರಾಜಪ್ಪ, ಚಿದಾನಂದ ಸ್ವಾಮಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕೃಷಿ ಕಾಲೇಜು ವಿದ್ಯಾರ್ಥಿಗಳಾದ ಕೃಪ, ಆರ್ ಭಾರದ್ವಾಜ್, ಅಕ್ಷತಾ ಎಂ, ಅಕ್ಷತಾ ಹಿರೇಮಠ, ದೀಪ ಸುನಾಗದ್, ಹಿತ ಶ್ರೀ ಬಿ.ಎಂ, ಪ್ರಿಯಾಂಕಾ ಎಂಆರ್, ಪೃಥ್ವಿ, ಮೇಘನಾ, ಸುಜನ, ಹಾಗೂ ಪೋಷಕರು ಹಾಗೂ ಗ್ರಾಮಸ್ಥರು ಅಂಗನವಾಡಿ ಸಿಬ್ಬಂದಿಯವರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಸಂದರ್ಭದಲ್ಲಿ ಹಾಜರಿದ್ದು, ಗಣರಾಜ್ಯೋತ್ಸವದ ಕಾರ್ಯಕ್ರಮವನ್ನು ನೆರವೇರಿಸಿದರು.










