ಸಿದ್ದರಾಮಯ್ಯ-ಡಿಕೆ ಸುರೇಶ್ ನಿವೃತ್ತಿ ಜೀವನವನ್ನು ಬಾಂಗ್ಲಾದೇಶ ಅಥವಾ ಪಾಕಿಸ್ತಾನದಲ್ಲಿ ಕಳೆಯುವ ಯೋಚನೆ ಮಾಡಿರಬಹುದು: ಯಶ್‌ಪಾಲ್ ಸುವರ್ಣ.

49
firstsuddi

ಉಡುಪಿ: ವಿಜಯನಗರದಲ್ಲಿ ಕುಂಕುಮ ಬೇಡ ಎಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಜಿಲ್ಲೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಕಿಡಿಕಾರಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಓಲೈಕೆಗಾಗಿ ಸಿಎಂ ಹೀಗೆ ವರ್ತಿಸುತ್ತಾರೆ. ಸಿದ್ದರಾಮಯ್ಯ-ಡಿಕೆ ಸುರೇಶ್ ನಿವೃತ್ತಿ ಜೀವನವನ್ನು ಬಾಂಗ್ಲಾದೇಶ ಅಥವಾ ಪಾಕಿಸ್ತಾನದಲ್ಲಿ ಕಳೆಯುವ ಯೋಚನೆ ಮಾಡಿರಬಹುದು ಎಂದು ತಿರುಗೇಟು ಕೊಟ್ಟರು.

ಸಿದ್ದರಾಮಯ್ಯ ದೇಶ ವಿರೋಧಿ, ಹಿಂದೂ ವಿರೋಧಿ ನೀತಿ ಮುಂದುವರಿಸಿದ್ದಾರೆ. ಕಾಂಗ್ರೆಸ್ ಸಂಸದ ಪ್ರತ್ಯೇಕ ರಾಷ್ಟ್ರದ ಕೂಗು ಎಬ್ಬಿಸಿದ್ದಾರೆ. ಭ್ರಷ್ಟಾಚಾರ ದೇಶ ವಿರೋಧಿ, ಹಿಂದೂ ವಿರೋಧಿ ನಿಲುವನ್ನು ಕಾಂಗ್ರೆಸ್ ತಳೆದಿದೆ. ಕುಂಕುಮ ಕೊಡಲು ಬಂದಾಗ ಅದನ್ನು ಸಿದ್ದರಾಮಯ್ಯ ತಡೆದಿದ್ದಾರೆ ಎಂದು ಕಿಡಿಕಾರಿದರು.