ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಹೆಚ್ ಪ್ರತಾಪ್ ರೆಡ್ಡಿ ರಾಜೀನಾಮೆ…

54
firstsuddi

ಬೆಂಗಳೂರು: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (ಡಿಜಿಪಿ) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು. ಆದರೆ ವೈಯಕ್ತಿಕ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬರುವ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಹಿರಿಯ ಐಪಿಎಸ್ ಅಧಿಕಾರಿ ಸಿ.ಹೆಚ್ ಪ್ರತಾಪ್ ರೆಡ್ಡಿ ಅವರು ಜು. 01 1964ರಲ್ಲಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜನಸಿದರು. ಪ್ರತಾಪ್ ರೆಡ್ಡಿ ಬಿ.ಟೆಕ್ ಪದವೀಧರರು. ಇವರು 1991ರಲ್ಲಿ ಕರ್ನಾಟಕ ಕೆಡರ್​ನ ಐಪಿಎಸ್ ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿದರು. ಕರ್ನಾಟಕದಲ್ಲಿ ಹಾಸನ ಜಿಲ್ಲೆಯಲ್ಲಿ ಸಹಾಯಕ ಸೂಪರಿಟೆಂಡೆಂಟ್ ಆಗಿ ಪ್ರತಾಪ್ ರೆಡ್ಡಿ ಅವರು ಕೆಲಸ ಆರಂಭಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿ ಎಸ್‍ಪಿಯಾಗಿ, ಸಿಐಡಿಯಾಗಿ ಹಲವಾರು ಮಹತ್ವದ ಪ್ರಕರಣಗಳನ್ನು ಭೇದಿಸಿದ್ದಾರೆ.

ಇನ್ನೂ ಪ್ರತಾಪ್ ರೆಡ್ಡಿ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಪೊಲೀಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.