ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಲಿಸ್ಟ್ ರಿಲೀಸ್…

42
firstsuddi

ಬೆಂಗಳೂರು: ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಕಾಂಗ್ರೆಸ್ ಪ್ರಕಟಿಸಿದೆ.

ಅಜಯ್ ಮಾಕೆನ್, ಜಿಸಿ ಚಂದ್ರಶೇಖರ್ ಹಾಗೂ ಸಯ್ಯದ್ ನಾಸಿರ್ ಹುಸೇನ್‌ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ದೆಹಲಿ ಕಾಂಗ್ರೆಸ್‌ನ ನಾಯಕರಾಗಿರುವ ಅಜಯ್‌ ಮಾಕೇನ್‌ಗೆ ಈ ಬಾರಿ ಹೊಸದಾಗಿ ಅವಕಾಶ ನೀಡಲಾಗಿದೆ. ಇನ್ನು ಜಿಸಿ ಚಂದ್ರಶೇಖರ್‌ ಹಾಗೂ ಸಯ್ಯದ್‌ ನಾಸಿರ್‌ ಹುಸೇನ್‌ಗೆ ಮರು ಆಯ್ಕೆಗೆ ಅವಕಾಶ ನೀಡಲಾಗಿದೆ. ಎಲ್‌.ಹನುಮಂತಯ್ಯ ಅವರಿಗೆ ಇದ್ದ ಟಿಕೆಟ್‌ಅನ್ನು ಅಜಯ್‌ ಮಾಕೆನ್‌ಗೆ ನೀಡಲಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆಯೇ ಕೊನೆಯ ದಿನವಾಗಿದ್ದು, ಅದಕ್ಕೂ ಒಂದು ದಿನ ಮುನ್ನ ಕಾಂಗ್ರೆಸ್‌, ಕರ್ನಾಟಕದ ಅಭ್ಯರ್ಥಿಗಳ ಲಿಸ್ಟ್‌ ಪ್ರಕಟಿಸಿದೆ.