ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್​ಸ್ಟೇಬಲ್…

47
firstsuddi

ದಾವಣಗೆರೆ: ಸಶಸ್ತ್ರ ಮೀಸಲು ಪಡೆಯ ಕಾನ್ಸ್​ಸ್ಟೇಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಮಹಾನಗರ ಪಾಲಿಕೆಯ ಸ್ಟ್ರಾಂಗ್ ಬಳಿ ನಡೆದಿದೆ.

ಜಯನಗರ ಜಿಲ್ಲೆಯ ಹರಪನಹಳ್ಳಿ ನಿವಾಸಿ ಗುರುಮೂರ್ತಿ (34) ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್​ಸ್ಟೇಬಲ್. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗುರುಮೂರ್ತಿ ಅವರನ್ನು ದಾವಣಗೆರೆ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಕಾನ್ಸ್​ಸ್ಟೇಬಲ್ ಗುರುಮೂರ್ತಿ ಅವರು ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಗಾರ್ಡ್ ಡ್ಯೂಟಿ ಮಾಡುತ್ತಿದ್ದರು. ಮೇಲ್ನೋಟಕ್ಕೆ ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.