ಮಂಗಳೂರು: ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನಗಳ ಬ್ಯಾಟರಿಗಳನ್ನು ಕಳವು ಮಾಡಿದ ಆರೋಪಿಯನ್ನು ಕೊಣಾಜೆ ಪೊಲೀಸರು ದಸ್ತಗಿರಿ ಮಾಡಿ ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ರಿಯಾಜ್ ಪ್ರಾಯ (30) ಆರೋಪಿ. ದಿನಾಂಕ: 29-01-2024 ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಗಳ ಬ್ಯಾಟರಿಗಳು ಕಳ್ಳತನವಾದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದ ಆರೋಪಿಯ ಪತ್ತೆ ಕಾರ್ಯದಲ್ಲಿರುವಾಗ ದಿನಾಂಕ 14-02-2024 ರಂದು ಕೊಣಾಜೆ ಠಾಣಾ ಪಿ.ಎಸ್.ಐ ಅಶೋಕ ರವರು ಸಿಬ್ಬಂದಿಗಳಾದ ಸಂತೋಷ್,ಬಸವನಗೌಡ್ರ ಸುರೇಶ್ ಜೊತೆ ನಾಟೇಕಲ್ ಬಳಿ ಆರೋಪಿ ಹಾಗೂ ಆತ ಕೃತ್ಯಕ್ಕೆ ಉಪಯೋಗಿದ ಸ್ಕೂಟಿ ನಂಬರ್-ಕೆ ಎ 19 ಹೆಚ್ ಜಿ 0399 ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ಆರೋಪಿಯಿಂದ ಕೃತ್ಯಕ್ಕೆ ಉಪಯೋಗಿದ ವಾಹನ ಹಾಗೂ ಬ್ಯಾಟರಿಗಳು ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 3,90,000/- ರೂ ಆಗಿರುತ್ತದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಪತ್ತೆಕಾರ್ಯವನ್ನು ಮಂಗಳೂರು ನಗರ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರವಾಲ್, ಐ.ಪಿ.ಎಸ್‌ರವರ ಮಾರ್ಗದರ್ಶನದಂತೆ ಕಾನೂನು & ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಸಿದ್ದಾರ್ಥ ಗೋಯಲ್ ಐ.ಪಿ.ಎಸ್ ಮತ್ತು ಅಪರಾಧ & ಸಂಚಾರ ವಿಭಾಗದ ಡಿಸಿಪಿ ಶ್ರೀ ದಿನೇಶ್‌ಕುಮಾರ್ ನಿರ್ದೇಶನದಂತೆ, ಮಂಗಳೂರು ದಕ್ಷಿಣ ವಿಭಾಗದ ಎ.ಸಿ.ಪಿ. ಶ್ರೀಮತಿ ಧನ್ಯ ಎನ್ ನಾಯಕ ರವರ ನೇತೃತ್ವದಲ್ಲಿ ನಡೆಸಲಾಗಿರುತ್ತದೆ.










