ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ- ವಾರ್ಡನ್, ತಾಲೂಕಾಧಿಕಾರಿ ವಿರುದ್ಧ ದೂರು ದಾಖಲು…

47
firstsuddi

ರಾಯಚೂರು: ಹಾಸ್ಟೆಲ್‌ನಲ್ಲಿ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಜಿಲ್ಲೆಯ ಸಿಂಧನೂರು ನಗರದ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ನಡೆದಿದೆ.

ಹಿರೇಹುಸೇನಪ್ಪ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಿರೇಹುಸೇನಪ್ಪ ಅಂಬೇಡ್ಕರ್ ವಸತಿ ನಿಲಯದಲ್ಲಿದ್ದುಕೊಂಡು ಓದುತ್ತಿದ್ದನು.

ಹಿರೇಹುಸೇನಪ್ಪ ವಸತಿ ನಿಲಯದಲ್ಲಿನ ಸಮಸ್ಯೆಗಳ ಬಗ್ಗೆ ಪ್ರಶ್ನಿಸಿದ್ದಕ್ಕೆ ವಸತಿ ನಿಲಯದ ವಾರ್ಡನ್, ಬೇರೆ ವಿದ್ಯಾರ್ಥಿಗಳನ್ನು ಬಿಟ್ಟು ಮಾನಸಿಕ ಹಾಗೂ ದೈಹಿಕ ಕಿರುಕುಳ ಕಿರುಕುಳ ನೀಡಲಾಗುತ್ತಿತ್ತು. ಜೊತೆಗೆ ಮತ್ತೋರ್ವ ಅಧಿಕಾರಿ ಜಾತಿ ನಿಂದನೆ ಮಾಡುತ್ತಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿ ವಸತಿ ನಿಲಯದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಮೃತನ ತಾಯಿ ಹುಸೇನಮ್ಮ ಪೊಲೀಸರಿಗೆ ಲಿಖಿತವಾಗಿ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಹಾಸ್ಟೆಲ್ ವಾರ್ಡನ್ ಮತ್ತು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರ ಮೇಲೆ ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ವಿಚಾರ ತಿಳಿದ ಕೂಡಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.