ಬೆಂಗಳೂರು: ರಾಕ್ಲೈನ್ ಮಾಲ್ಗೆ ಬಿಬಿಎಂಪಿ ಹಾಕಿರುವ ಸೀಲ್ ಓಪನ್ ಮಾಡುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಮಾಲ್ಗೆ ಬಿಬಿಎಂಪಿ ಬೀಗ ಹಾಕಿದ್ದ ಕ್ರಮವನ್ನು ಪ್ರಶ್ನಿಸಿ ರಾಕ್ಲೈನ್ ಮಾಲ್ ಆಡಳಿತ ಮಂಡಳಿ ಹೈಕೋರ್ಟ್ಗೆ ಮನವಿ ಮಾಡಿತ್ತು. ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ ಅವರ ಪೀಠವು ಈ ಆದೇಶ ಹೊರಡಿಸಿದೆ.
ಕಳೆದ ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಜಾಲಹಳ್ಳಿ ಕ್ರಾಸ್ ಬಳಿ ಇರೋ ರಾಕ್ಲೈನ್ ಮಾಲ್ಗೆ ಬೀಗ ಹಾಕಿದ್ದರು. ಇದನ್ನು ಪ್ರಶ್ನಿಸಿ ರಾಕ್ಲೈನ್ ವೆಂಕಟೇಶ್ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಬಿಬಿಎಂಪಿ ಆದೇಶ ಪ್ರಶ್ನಿಸಲು ಪ್ರತ್ಯೇಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.










