ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 167 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,28,732ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,476ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,50,28,732 ಮಂದಿ ಸೋಂಕಿತರ ಪೈಕಿ ಈವರೆಗೆ 4,44,94,390 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










