ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಅಂಧ ದಂಪತಿ ಸಾವು…

53
firstsuddi

ಬೆಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಅಂಧ ದಂಪತಿ ಸಾವಿಗೀಡಾಗಿರುವ ಘಟನೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಮೃತರನ್ನು ಶ್ರೀಧರ್ (52) ಮತ್ತು ಅರ್ಚನಾ (35) ಎಂದು ಗುರುತಿಸಲಾಗಿದೆ. ಶ್ರೀಧರ್ ಮಾಗಡಿ ಬಳಿಯ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ವೇಗವಾಗಿ ಹೋಗಿದ್ದರಿಂದ ಅಪಘಾತ ನಡೆದ ಸ್ಥಳದಿಂದ ಸುಮಾರು 100 ಮೀಟರ್ ವರೆಗೆ ಎಳೆದೊಯ್ದು ಬೈಕ್ ಸಮೇತ ಚರಂಡಿಗೆ ಬಿದ್ದಿದ್ದಾನೆ.

ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದು ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.