ಬೈಕ್‌ಗೆ ಲಾರಿ ಡಿಕ್ಕಿ- 6 ವರ್ಷದ ಬಾಲಕ ಸೇರಿ ಮೂವರ ಸಾವು…

53
firstsuddi

ಹಾವೇರಿ: ಲಾರಿಯೊಂದು ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯಿರುವ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ನಡೆದಿದೆ.

ಆಸಿಫ್ ಉಲ್ಲಾ (34), ಆತನ ಪತ್ನಿ ಆಫ್ರೀನಾಬಾನು (27), ಪುತ್ರ ಅರ್ಫಾನ್ (6) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪುತ್ರಿ ರುಕ್ಸಾರ (3) ತೀವ್ರ ಗಾಯಗೊಂಡಿದ್ದು, ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಕರ ಮನೆಗೆಂದು ಶಿಡೇನೂರ ಗ್ರಾಮಕ್ಕೆ ಬಂದಿದ್ದ ಕುಟುಂಬ ಮರಳಿ ಹಾವೇರಿಗೆ ಹೋಗುವಾಗ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಸಂಭವಿಸಿದೆ. ಲಾರಿ ಚಾಲಕ ಧೀರೇಂದ್ರ ಯಾದವ್‌ನನ್ನು ಬ್ಯಾಡಗಿ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.