ಬೆಳಗಾವಿಯಲ್ಲಿ ಮತ್ತೊಬ್ಬ ಮಹಿಳೆಯನ್ನು ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ ಆರೋಪ…

53
firstsuddi

ಬೆಳಗಾವಿ: ಕಳೆದ ವರ್ಷಾಂತ್ಯ ಗಡಿ ಜಿಲ್ಲೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತು.

ಈ ಘಟನೆಯಂತೆಯೇ ಅದೇ ಬೆಳಗಾವಿಯಲ್ಲಿ ಅಂಥದ್ದೇ ಅಮಾನವೀಯ ಘಟನೆ ನಡೆದಿದೆ ಎಂದು ಸುದ್ದಿಯಾಗಿದೆ. ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಒತ್ತುವರಿ ಪ್ರಶ್ನಿಸಿದ ಬಡ ಕುಟುಂಬದ ಮೇಲೆ ದೌರ್ಜನ್ಯ ಎಸಗಲಾಗಿದೆ.

ರಾಮಪ್ಪ ಎಂಬವರಿಗೆ 1991ರಲ್ಲಿ ಸರ್ಕಾರ 3 ಎಕರೆ ಜಮೀನು ನೀಡಿತ್ತು. ಆ ಬಳಿಕದಿಂದ ರಾಮಪ್ಪ ಇದೇ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಕೆಲ ದಿನಗಳ ಬಳಿಕ ರಾಮಪ್ಪಗೆ ಸೇರಿದ ಜಮೀನಿನ 20 ಗುಂಟೆಯನ್ನು ಒತ್ತುವರಿ ಮಾಡಿದ್ದಾರೆ. ಐನಾಪುರದ ಸುಭಾಷ್ ದಾನೊಳ್ಳಿ, ಸುರೇಶ ದಾನೊಳ್ಳಿ, ಮಾಯಪ್ಪ ಹಳ್ಯಾಳ ವಿರುದ್ಧ ಒತ್ತುವರಿ ಆರೋಪ ಕೇಳಿಬಂದಿದೆ.

ನಮಗೆ ರಾಜಕೀಯ ನಾಯಕರ ಸಂಪರ್ಕ ಇದೆ ಎಂದು ಹೇಳಿ ದಬ್ಬಾಳಿಕೆ ಮಾಡುತ್ತಿದ್ದಾರೆ. ಜಮೀನು ಜೊತೆ ರಸ್ತೆಗೆ ಮೀಸಲಿಟ್ಟ ಜಾಗವೂ ಒತ್ತುವರಿ ಮಾಡಿದ್ದಾರೆ. ಈ ಒತ್ತುವರಿ ಪ್ರಶ್ನಿಸಲು ಹೋಗಿದ್ದ ಪತ್ನಿ ಜಯಶ್ರೀ ಜೊತೆಗೆ ಅಸಭ್ಯ ವರ್ತನೆ ತೋರಿದ್ದಾರೆ. ಅಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸುವ ಜೊತೆಗೆ ಮಹಿಳೆ ಸೀರೆ ಕಳಚಿ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಮಹಿಳೆ ಅರೆ ಬೆತ್ತಲೆ ಮಾಡಿ ಜೊತೆಗೆ ಪುತ್ರ ಮುರಾರಿ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.