ನವದೆಹಲಿ: ಎಲ್ಪಿಜಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ ಇಂದಿನಿಂದ ಹೆಚ್ಚಳವಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಿವೆ. ಇದರೊಂದಿಗೆ, ಸತತ ಎರಡನೇ ತಿಂಗಳು ಎಲ್ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾದಂತಾಗಿದೆ.
ಈಗಿನ ಬೆಲೆಗಳ ಏರಿಕೆಯ ನಂತರ, ದೆಹಲಿಯಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ 1,795 ರೂ.ಗೆ ಲಭ್ಯವಾಗಲಿದೆ. ಬೆಲೆ ಏರಿಕೆಯು ಕೋಲ್ಕತ್ತಾ, ಮುಂಬೈ, ಚೆನ್ನೈ ಮತ್ತು ಇತರ ಮಹಾನಗರಗಳ ಜನರ ಮೇಲೂ ಪರಿಣಾಮ ಬೀರಿದೆ.










