ಮದುವೆ ವಾರ್ಷಿಕೋತ್ಸವಕ್ಕೆ ಗಿಫ್ಟ್ ಕೊಟ್ಟಿಲ್ಲವೆಂದು ಗಂಡನಿಗೆ ಚಾಕುವಿನಿಂದ ಇರಿದ ಪತ್ನಿ…

49
firstsuddi

ಬೆಂಗಳೂರು: ಮದುವೆ ವಾರ್ಷಿಕೋತ್ಸವಕ್ಕೆ ಉಡುಗೊರೆ ಕೊಡಲಿಲ್ಲ ಎಂದು ಕೋಪಗೊಂಡು ಮಹಿಳೆಯೊಬ್ಬಳು ತನ್ನ ಗಂಡನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಬೆಳ್ಳಂದೂರಿನಲ್ಲಿ ಫೆ.27 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮದುವೆ ವಾರ್ಷಿಕೋತ್ಸವದ ದಿನ ಗಂಡ ನಿದ್ದೆಗೆ ಜಾರಿದ್ದ. ಈ ವೇಳೆ ಅಡುಗೆ ಮನೆಯಿಂದ ಚಾಕು ತಂದು ಪತ್ನಿ ಇರಿದಿದ್ದಾಳೆ. ಚಾಕುವಿನಿಂದ ಇರಿದ ಹಿನ್ನೆಲೆ ಗಂಡನ ಕೈಗೆ ರಕ್ತಗಾಯವಾಗಿದೆ. ಸ್ಥಳೀಯರ ಸಹಾಯದಿಂದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಂಡ-ಹೆಂಡತಿಗೆ ಪೊಲೀಸರು ಕೌನ್ಸೆಲಿಂಗ್ ನಡೆಸಿದ್ದಾರೆ.

ಪೊಲೀಸರು ವಿಚಾರಣೆ ನಡೆಸಿದಾಗ, ಗಂಡನ ಅಜ್ಜ ತೀರಿಕೊಂಡಿದ್ದ ಕಾರಣ ಆತ ಪತ್ನಿಗೆ ವೆಡ್ಡಿಂಗ್ ಆನಿವರ್ಸರಿ ಗಿಫ್ಟ್ ತಂದುಕೊಟ್ಟಿಲ್ಲ. ಆದರೆ ವಿವಾಹ ವಾರ್ಷಿಕೋತ್ಸವಕ್ಕೆ ಮೊದಲ ಬಾರಿಗೆ ಗಿಫ್ಟ್ ನೀಡದೇ ಇದ್ದ ಕಾರಣ ಪತ್ನಿ ವಿಪರೀತ ಕೋಪಗೊಂಡಿದ್ದಳು. ಹೀಗಾಗಿ ಈ ಕೃತ್ಯ ಎಸಗಿದ್ದಾಗಿ ತಿಳಿದುಬಂದಿದೆ.