ಕಾರಿನಲ್ಲಿ ಅನುಮಾನಾಸ್ಪದವಾಗಿ ಉದ್ಯಮಿ ಶವಪತ್ತೆ, ಕೊಲೆ ಶಂಕೆ…

36
firstsuddi

ಬೆಂಗಳೂರು: ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗಲೂರು ಕ್ರಾಸ್ ಬಳಿಯ ಬದಿಯಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ಕಾರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಶವವಾಗಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇಂದು ಬೆಳಗ್ಗೆ ಕಾರಿನಲ್ಲಿ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲಿಸಿದ ಪೊಲೀಸರು, ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ವ್ಯಕ್ತಿಯನ್ನು ಕೃಷ್ಣಯಾದವ್ ಎಂದು ಗುರುತಿಸಲಾಗಿದೆ.

ಮೃತ ವ್ಯಕ್ತಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಬಗ್ಗೆ ತಿಳಿದು ಬಂದಿದ್ದು, ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದರು ಎಂದು ಗೊತ್ತಾಗಿದೆ. ನಿನ್ನೆ ರಾತ್ರಿ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋಗಿದ್ದ ಕೃಷ್ಣಯಾದವ್ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹದ ಮೇಲೆ ಗಾಯದ ಕುರುಹುಗಳು ಕಂಡುಬಂದಿದ್ದು, ಯಾರೋ ಅಪರಿಚಿತರು ಹತ್ಯೆವೆಸಗಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ಶಂಕಿಸಿದ್ದಾರೆ. ಸದ್ಯ ಪೊಲೀಸರು ತೀವ್ರ ತನಿಖೆ ಶುರು ಮಾಡಿದ್ದಾರೆ.