ನಾಳೆ ಲೋಕಸಭೆ ಚುನಾವಣೆಯ ವೇಳಾಪಟ್ಟಿ ಬಿಡುಗಡೆ…

44
firstsuddi

ನವದೆಹಲಿ: ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಮಧ್ಯಾಹ್ನ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.

ಏಪ್ರಿಲ್/ಮೇ ತಿಂಗಳಲ್ಲಿ ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಿಗೆ ಮತದಾನ ನಡೆಯಲಿದೆ. ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಈ ವರ್ಷದ ಕೊನೆಯಲ್ಲಿ ಮತದಾನ ಮಾಡಲು ನಿರ್ಧರಿಸಲಾಗಿದೆ.