ಬಿಹಾರ: ರಾಜ್ಯದ ಖಗಾರಿಯಾ ಎಂಬಲ್ಲಿನ ಪಸ್ರಾಹ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚೌತಮ್ ಬ್ಲಾಕ್ ಪ್ರದೇಶದಲ್ಲಿ ಮದುವೆ ಮುಗಿಸಿ ಸಂಬಂಧಿಕರು ಕಾರಿನಲ್ಲಿ ಹಿಂದಿರುಗುತ್ತಿದ್ದರು. ಎನ್ಎಚ್ 31ರ ವಿದ್ಯಾರತನ್ ಪೆಟ್ರೋಲ್ ಪಂಪ್ ಸಮೀಪ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಕಾರು ರಸ್ತೆ ಬದಿಗೆ ಉರುಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರಲ್ಲಿ ಮೂವರು ಮಕ್ಕಳಿದ್ದಾರೆ ಎಂದು ಗೋಗ್ರಿಯ ಡಿಎಸ್ಪಿ ರಮೇಶ್ ಕುಮಾರ್ ತಿಳಿಸಿದ್ದಾರೆ.










